06/07/2024 9:24 AM Total Views: 35815
ವಾಲ್ಮೀಕಿ ನಿಗಮ ಹಗರಣದ ತನಿಖೆ ಚುರುಕು: ಕಾಂಗ್ರೆಸ್ನ ಇಬ್ಬರು ಶಾಸಕರಿಗೆ ಕುತ್ತು
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ
ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ಚುರುಕುಗೊಂಡಿದೆ. ಒಂದು ಕಡೆ ಎಸ್ಐಟಿ ತನಿಖೆ ನಡೆಸುತ್ತಿದ್ದರೆ ಮತ್ತೊಂದು ಕಡೆ ಸಿಬಿಐ ಕೂಡ ಚಾರ್ಜ್ ತೆಗೆದುಕೊಂಡು ತನಿಖೆ ಕೈಗೆತ್ತಿಕೊಂಡಿತ್ತು. ಈಗಾಗಲೇ ಎಸ್ಐಟಿ ಅಧಿಕಾರಿಗಳು ಹಲವರನ್ನ ಬಂಧಿಸಿ ವಿಚಾರಣೆ ನಡೆಸಿದ್ದು ತನಿಖೆ ಮುಂದುವರೆದಿದೆ. ಇದೀಗ ಮಾಜಿ ಸಚಿವ ನಾಗೇಂದ್ರ, ಬಸನಗೌಡ ದದ್ದಲ್ಗೂ SIT ನೋಟಿಸ್ ನೀಡಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ (Valmiki Development Corporation scam) ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಮತ್ತು ವಾಲ್ಮೀಕಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ಗೆ ವಿಶೇಷ ತನಿಖಾ ತಂಡದಿಂದ ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಇಬ್ಬರಿಗೂ ಎಸ್ಐಟಿಯಿಂದ ನೋಟಿಸ್ ನೀಡಲಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮತ್ತು ಹಗರಣದಲ್ಲಿ ಹೆಸರು ಕೇಳಿಬಂದ ಹಿನ್ನೆಲೆ ಮಾಜಿ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ್ದರು.
ಮಾಜಿ ಸಚಿವ ನಾಗೇಂದ್ರ ರಾಜೀನಾಮೆ ನೀಡಿದ ಬಳಿಕ ಕೂಡ ಎಸ್ಐಟಿ ಅಧಿಕಾರಿಗಳಿಂದ ಯಾವುದೇ ವಿಚಾರಣೆ ಮಾಡಿರಲಿಲ್ಲ. ಈ ಬಗ್ಗೆ ಬಿಜೆಪಿ ಯಾಕೆ ಅವರನ್ನು ವಿಚಾರಣೆ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮೊದಲ ಬಾರಿಗೆ ಮಾಜಿ ಸಚಿವ ನಾಗೇಂದ್ರಗೆ ಎಸ್ಐಟಿ ನೋಟಿಸ್ ನೀಡಿದು, ತನಿಖೆಗೆ ಹಾಜರಾಗುವಂತೆ ತಿಳಿಸಿದೆ. ಸದ್ಯ ನಾಗೇಂದ್ರಗೆ ಢವಢವ ಶುರುವಾಗಿದೆ.
ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ಚುರುಕುಗೊಂಡಿದೆ. ಒಂದು ಕಡೆ ಎಸ್ಐಟಿ ತನಿಖೆ ನಡೆಸುತ್ತಿದ್ದರೆ ಮತ್ತೊಂದು ಕಡೆ ಸಿಬಿಐ ಕೂಡ ಚಾರ್ಜ್ ತೆಗೆದುಕೊಂಡು ತನಿಖೆ ಕೈಗೆತ್ತಿಕೊಂಡಿತ್ತು. ಈಗಾಗಲೇ ಎಸ್ಐಟಿ ಅಧಿಕಾರಿಗಳು ಹಲವರನ್ನ ಬಂಧಿಸಿ ವಿಚಾರಣೆ ನಡೆಸಿದ್ದು ತನಿಖೆ ಮುಂದುವರೆದಿದೆ.