23/07/2024 12:12 PM Total Views: 46934

ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ
ವಾಯುಭಾರ ಕುಸಿತ; ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ
ಬೆಂಗಳೂರು : ರಾಜ್ಯದಲ್ಲಿ ಎರಡು ವಾರಗಳಿಂದ ಮುಂಗಾರು ಮಳೆ ಆರ್ಭಟಿಸುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಎಲ್ಲಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರಿತ್ಯದಿಂದ ಕೇರಳ, ಕರ್ನಾಟಕ ಕರಾವಳಿಯಿಂದ ಮಹಾರಾಷ್ಟ್ರದವರೆಗೂ ಮೇಲುಬ್ಬರ ನಿರ್ಮಾಣ ಮತ್ತು ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಇದರಿಂದ ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವೈಪರಿತ್ಯಗಳಿಗಿಂತಲೂ ಅರಬ್ಬಿ ಸಮುದ್ರದಲ್ಲಿ ಎರಡು ವಾರದಿಂದ ನಿರಂತರವಾಗಿ ಉಂಟಾಗಿರುವ ಸುಳಿಗಾಳಿ (ಸ್ಟ್ರಫ್) ವಾತಾವರಣ ತೀವ್ರಗೊಳ್ಳುತ್ತಲೇ ಇದೆ. ಇದು ವಾಯುಭಾರ ಕುಸಿತವಾಗಿ ಬದಲಾಗಿದೆ. ವಾಯುಭಾರ ಕುಸಿತದಿಂದಾಗಿ ರಾಜ್ಯದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 40-50 ಕಿಮೀ ಕಂಡು ಬರಲಿದೆ,
ರಾಜ್ಯದಲ್ಲಿ ಎರಡು ವಾರಗಳಿಂದ ಮುಂಗಾರು ಮಳೆ ಆರ್ಭಟಿಸುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಎಲ್ಲಡೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರಿತ್ಯದಿಂದ ಕೇರಳ, ಕರ್ನಾಟಕ ಕರಾವಳಿಯಿಂದ ಮಹಾರಾಷ್ಟ್ರದವರೆಗೂ ಮೇಲುಬ್ಬರ ನಿರ್ಮಾಣ ಮತ್ತು ಮೇಲ್ಮೈ ಸುಳಿಗಾಳಿ ಉಂಟಾಗಿದೆ. ಇದರಿಂದ ಮುಂದಿನ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.
ಒಳನಾಡಿನ ಬೆಳಗಾವಿ, ಬೀದರ್, ಕಲಬುರ್ಗಿ, ಯಾದಗಿರಿ ಮತ್ತು ಹಾಸನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಗಾಳಿಯ ವೇಗವು (40-50) ತಲುಪುವ ಸಾಧ್ಯತೆ ಇದೆ. ಸದ್ಯಕ್ಕೆ ಅರಬ್ಬಿ ಸಮುದ್ರದಲ್ಲಿ ವೈಪರಿತ್ಯ ಕಡಿಮೆ ಆಗುವ ಲಕ್ಷಣಗಳು ಇಲ್ಲವಾಗಿದ್ದು, ಕ್ರಮೇಣ ತಗ್ಗುವ ಸಾಧ್ಯತೆಗಳಿವೆ.
ಇನ್ನೂ ಒಡಿಶಾ ಪುರಿಯಿಂದ 40 ಕಿಮೀ ವೇಗದ ಗಾಳಿಯು ದಕ್ಷಿಣ-ನೈಋತ್ಯದ ಕಡೆಗೆ ಮತ್ತು 70 ಕಿಮೀ ವೇಗದಲ್ಲಿ ಮತ್ತೊಂದು ಸುಳಿಗಾಳಿಯು ಒಡಿಶಾ ಪೂರ್ವ-ಈಶಾನ್ಯ ಭಾಗದಿಂದ ಛತ್ತೀಸ್‌ಗಢದತ್ತ ಚಲಿಸುವ ಸಾಧ್ಯತೆ ಇದೆ. ಇದು ಸೋಮವಾರದ ಹೊತ್ತಿಗೆ ದುರ್ಬಲಗೊಳ್ಳುತ್ತದೆ ಎಂದು ಐಎಂಡಿ ಬೆಂಗಳೂರು ವಿಜ್ಞಾನಿ ಡಾ.ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
