26/09/2024 7:10 PM Total Views: 35785
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ
ಅತ್ಯುತ್ತಮ ಕಂದಾಯ ಅಧಿಕಾರಗಳ ಪಟ್ಟಿಯಲ್ಲಿ ಖಡಕ್ ಅಧಿಕಾರಿ ಹೇಮಂತ್ ಕುಮಾರ್ ಸೇರಿದಂತೆ ಕುಷ್ಟಗಿ ತಹಶೀಲ್ದಾರರಿಗೂ ಪ್ರಶಸ್ತಿ,
ಬೆಂಗಳೂರು : ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರ್ ಹಾಗು ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವು “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ಘೋಷಿಸಲಾಗಿದೆ.
ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿಗಳ ಪಟ್ಟಿಯಲ್ಲಿ ಈ ಹಿಂದೆ ಗಂಗಾವತಿ ನಗರಸಭೆಯ ಪೌರಾಯುಕ್ತರಾಗಿ ಕೆಲಸ ಮಾಡಿ ಗಂಗಾವತಿ ನಗರಸಭೆಗೆ ಕೋಟ್ಯಂತರ ರೂಪಾಯಿಗಳ ಆದಾಯವನ್ನು ಹೆಚ್ಚಿಸಿದ ಹೇಮಂತ್ ಕುಮಾರ್ (ಬಳ್ಳಾರಿಯ ಉಪವಿಭಾಗಾಧಿಕಾರಿಗಳು) ಸೇರಿದಂತೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ತಹಶೀಲ್ದಾರ್ ಶ್ರುತಿ ಎಂ, ಹಾಗು ಅಶೋಕ್ ವಿ ಶಿಗ್ಗಾಂವಿ, ಇವರಿಗೂ ಸಹಿತ ಈ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಎಂದು ಗುರುತಿಸಿದ್ದು ನಮ್ಮ ಕೊಪ್ಪಳ ಜಿಲ್ಲೆಯ ಹೆಮ್ಮೆಯ ವಿಷಯವಾಗಿದೆ
ರಾಜ್ಯ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ
ಅಧಿಕಾರಿ-2024″ ಪ್ರಶಸ್ತಿಗಳನ್ನು ಘೋಷಿಸಿದ್ದು,
ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು
ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ
ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ
ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ,
ತಹಶೀಲ್ದಾರಗಳಿಗೆ ಹಾಗೂ ಗ್ರಾಮ ಆಡಳಿತ
ಅಧಿಕಾರಿಗಳಿಗೆ ಸರ್ಕಾರವು “ವರ್ಷದ ಅತ್ಯುತ್ತಮ
ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡಲು
ಹರ್ಷಿಸುತ್ತದೆ.
ಈ ಹಿನ್ನೆಲೆಯಲ್ಲಿ ನಾಳೆ ದಿನಾಂಕ:27.09.2024 ರಂದು ಬೆಳಿಗ್ಗೆ 10 ಗಂಟೆಗೆ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ವಿಕಾಸ ಸೌಧ, ಕೊಠಡಿ ಸಂಖ್ಯೆ 419 ರಲ್ಲಿ ನಡೆಯಲಿರುವ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024″ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಗಿದೆ.