12/11/2024 8:06 PM Total Views: 40233

ಲಂಚ ಪಡೆಯುತ್ತಿದ್ದ ತೋಟಗಾರಿಕಾ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ
ಗಂಗಾವತಿ: ತೋಟಗಾರಿಕಾ ಇಲಾಖೆಯ ವಿವಿಧ ಯೋಜನೆಗಳಿಗೆ ಸಲಕರಣೆಗಳನ್ನು ಪೂರೈಕೆ ಮಾಡಿದ ವ್ಯಾಪಾರಿ ಒಬ್ಬರಿಗೆ ಬಿಲ್ ಪಾವತಿ ಮಾಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದ ತೋಟಗಾರಿಕೆಯ ಹಿರಿಯ ಸಹಾಯಕ ನಿರ್ದೇಶಕರೊಬ್ಬರು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಸೋಮವಾರ ಸಂಜೆ ಜರುಗಿದೆ.
ಕಾರಟಗಿ ತಿಮ್ಮಾಪುರ ಗ್ರಾಮದ ಪಂಚಾಕ್ಷರಿ ಎಂಬ ವ್ಯಾಪಾರಿ ತೋಟಗಾರಿಕಾ ಇಲಾಖೆಯ ವಿವಿಧ ಯೋಜನೆಗಳಿಗೆ ರೈತರಿಗೆ ಸಲಕರಣೆಗಳನ್ನು ಪೂರೈಕೆ ಮಾಡಿದ್ದರು ಅದರ ಬಿಲ್ ಪಾವತಿ ಮಾಡಲು ಹಿರಿಯ ಸಹಾಯಕ ನಿರ್ದೇಶಕ ಮಹೇಶ ಎಚ್. ಅವರು 1 ಲಕ್ಷ ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು.
ಈ ಕುರಿತು ಪಂಚಾಕ್ಷರಿ ಅವರು ಕೊಪ್ಪಳದ ಲೋಕಾಯುಕ್ತರಿಗೆ ದೂರು ನೀಡಿದ್ದರು. ಸೋಮವಾರ ಸಂಜೆ 6 ಗಂಟೆಗೆ ಗಂಗಾವತಿ ತೋಟಗಾರಿಕೆ ಕಚೇರಿಯಲ್ಲಿ ಹಿರಿಯ ಸಹಾಯಕ ನಿರ್ದೇಶಕ ಮಹೇಶ್ ಎಚ್ ಇವರು ಹಣವನ್ನು ಸ್ವೀಕರಿಸುವ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸ ಇನ್ಪೆಕ್ಟರ್ ವಿಜಯಕುಮಾರ ನೇತೃತ್ವದಲ್ಲಿ ದಾಳಿ ನಡೆಸಿ, ಲಂಚ ಪಡೆಯುತ್ತಿದ್ದ ಮಹೇಶ್ ಎಚ್.ಎಂಬುವರನ್ನು ಹಣದ ಸಮೇತ ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.
