ಕಾರ್ಪೊರೇಟ್ ಕಂಪನಿಗಳ ಹಣದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವಬದಲು ತೆರಿಗೆ ಹಣದಲ್ಲಿ ಅಭಿವೃದ್ಧಿ ಪಡಿಸಿ : ಗಂಗರಾಜ ಅಳ್ಳಳ್ಳಿ

06/09/2025 7:16 PM Total Views: 85647

Gouse Dafedar

ಕಾರ್ಪೊರೇಟ್ ಕಂಪನಿಗಳ ಹಣದಲ್ಲಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವಬದಲು ತೆರಿಗೆ ಹಣದಲ್ಲಿ ಅಭಿವೃದ್ಧಿ ಪಡಿಸಿ : ಗಂಗರಾಜ ಅಳ್ಳಳ್ಳಿ 

 

ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ

ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಸ್ಥಾಪನೆಗೆ ಕಾರ್ಪೊರೇಟ್‌ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಬಳಸಲಾಗುವುದು ಎಂದು ರಾಜ್ಯದ ಮಾನ್ಯ ಉಪ ಮುಖ್ಯ ಮಂತ್ರಿಗಳು ಕಾರ್ಯಕ್ರಮವೊಂದರಲ್ಲಿ ಹೇಳಿರುವುದು ಪತ್ರಿಕೆಗಳಲ್ಲಿ ವರದಿಯಾಗಿದೆ.
ರಾಜ್ಯದ ಸರ್ಕಾರಿ ಶಾಲೆಗಳ ಪರಿಸ್ಥಿತಿ ಅತ್ಯಂತ ದಯನೀಯವಾಗಿದೆ. ಈ ಬಾರಿ ಮಳೆಗೆ ಶಾಲಾ ಕೋಠಡಿಗಳು ಸೋರುತ್ತಿದೆ. ಅನೇಕ ಶಾಲೆಗಳ ಮೇಲ್ಛಾವಣಿಗಳು ಕುಸಿಯುವ ಹಂತದಲ್ಲಿದೆ. ಪೀಠೋಪಕರಣಗಳು, ಶೌಚಾಲಯಗಳು ಇಲ್ಲದೇ ಕಲಿಕೆ ಕುಂಟಿತಗೊಳ್ಳುತ್ತಿದೆ. ಸರ್ಕಾರಿ ಶಾಲೆಗಳನ್ನು ಬಲಪಡಿಸಿಬೇಕಾದ ಅವಶ್ಯಕತೆ ತೀವ್ರವಾಗಿದೆ. ಸರ್ಕಾರವು ತನ್ನ ಜನರಿಗೆ ಶಿಕ್ಷಣ ನೀಡುವ ಪ್ರಾಥಮಿಕ ಜವಾಬ್ದಾರಿಯನ್ನು ನೆರವೇರಿಸಬೇಕೆಂಬುದು ರಾಜ್ಯದ ಜನರ ಆಗ್ರಹ ವಾಗಿದೆ. ಜನರು ನೀಡುವ ತೆರಿಗೆ ಹಣದಲ್ಲಿ ಅಭಿವೃದ್ಧಿಪಡಿಸಬೇಕಾದ, ಜನಗಳ ಸ್ವತ್ತಾದ ಈ ಶಾಲೆಗಳನ್ನು ಈಗ ಸರ್ಕಾರ ಕಾರ್ಪೋರೇಟ್ ಕಂಪನಿಗಳ ಮಡಿಲಿಗಿಡಲು ಹೊರಟಿದೆ‌. ಮಹಾನ್ ವ್ಯಕ್ತಿಗಳ ಹೆಸರುಗಳನ್ನು ಇಡುವ ಬದಲು ಈ ಕಾರ್ಪೋರೇಟ್ ಕಂಪನಿಗಳ ಹೆಸರು ಶಾಲೆಗಳಿಗೆ ಇಡುವ ಪ್ರಸ್ತಾಪವನ್ನು ಮಾಡಿರುವುದು, ಸರ್ಕಾರ ದಲ್ಲಾಳಿ ಕೆಲಸಕ್ಕೆ ಇಳಿದಿದೆಯೇ ಎಂಬ ಪ್ರಶ್ನೆ ಮೂಡಿಸುತ್ತಿದೆ‌. ಕಾರ್ಪೋರೇಟ್ ಕಂಪನಿಗಳ ಭಿಕ್ಷಾ ಹಣದಲ್ಲಿ ನಮ್ಮ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಬದಲು ನಮ್ಮ ಹಕ್ಕಿನ ತೆರಿಗೆ ಹಣದಲ್ಲಿ ಶಾಲೆಗಳನ್ನು ನಿರ್ಮಿಸಿ ಅಭಿವೃದ್ಧಿ ಪಡಿಸಲಿ. ಇನ್ನು ಕಂಪನಿಗಳ ಮೇಲೆ ತೆರಿಗೆ ಹೆಚ್ಚಿಸಿ ಅವರಿಂದ ನ್ಯಾಯಯುತವಾಗಿ ಹಣ ವಸೂಲಿ ಮಾಡಲಿ.
ಮಾನ್ಯ ಉಪ ಮುಖ್ಯಮಂತ್ರಿಗಳು ತಮ್ಮ ಈ ಪ್ರಸ್ತಾಪನೆಯನ್ನು ಕೈಬಿಡಬೇಕೆಂದು ಗಂಗರಾಜ ಅಳ್ಳಳ್ಳಿ  ಎಐಡಿಎಸ್ಓ ಜಿಲ್ಲಾ ಸಂಚಾಲಕರು ಹಾಗು ರಾಜ್ಯದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ,
Read Our Photo Story
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ವಾಟ್ಸಾಪ್ ಗ್ರೂಪ್ ನ್ನು ಸೇರಿರಿ
WhatsApp Icon
Subscribe My YouTube