08/11/2025 9:42 AM Total Views: 85641

ಫೋನ್ ಪೇ ಮೂಲಕ ಪರಿಚಯವಾಗಿ ಲವ್ವಿ ಡವ್ವಿ: ಗರ್ಭಿಣಿಯಾದ 9ನೇ ತರಗತಿ ವಿದ್ಯಾರ್ಥಿನಿ
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ
ಮಸ್ಕಿ : ಪ್ರೀತಿ-ಪ್ರೇಮದ ಬಲೆಗೆ ಬಿದ್ದು 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಂತ್ರಸ್ತ ಯುವತಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಪಿ ಶಿವಮೂರ್ತಿ(25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ
ಸಂತ್ರಸ್ತ ವಿದ್ಯಾರ್ಥಿನಿಯ ತಂದೆ ಚಿಕನ್ ಶಾಪ್ ಹೊಂದಿದ್ದು, ಇಲ್ಲಿ ಮಾಂಸ ಖರೀದಿಗೆ ಬಂದಿದ್ದ ಆರೋಪಿ ಶಿವಮೂರ್ತಿ ಫೋನ್ ಪೇ ಮೂಲಕ ಹಣ ಪಾವತಿಸಿದ್ದ. ಬಳಿಕ ಫೋನ್ ಪೇ ಮಾಡಿರುವ ಮೊಬೈಲ್ ಸಂಖ್ಯೆಯನ್ನ ಆತ ಸಂಪರ್ಕಿಸಿದ್ದು, ಸಂತ್ರಸ್ತೆಯ ಪರಿಚಯವಾಗಿದೆ. ಬಳಿಕ ಇಬ್ಬರ ನಡುವೆ ಪ್ರೀತಿ ಆರಂಭವಾಗಿದ್ದು, ದೈಹಿಕ ಸಂಪರ್ಕದವರೆಗೂ ಹೋಗಿದೆ. ಈ ನಡುವೆ ಅಕ್ಟೋಬರ್ 30ರ ರಾತ್ರಿ ಸಂತ್ರಸ್ತೆ ನಾಪತ್ತೆಯಾಗಿದ್ದು, ಮನೆಯವರೆಲ್ಲ ಸೇರಿ ಹುಡುಕಿದರೂ ಆಕೆಯ ಸುಳಿವು ಸಿಕ್ಕಿರುವುದಿಲ್ಲ. ಈ ಹಿನ್ನಲೆ ಪೋಷಕರು ಮಗಳು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಿಸಿದ್ದರು. ಪೊಲೀಸರು ಕೇಸ್ ಬೆನ್ನುಹತ್ತಿದಾಗ ನಾಪತ್ತೆಯಾಗಿರೋ ಬಾಲಕಿ ಗರ್ಭಿಣಿ ಎಂಬ ವಿಷಯ ಬೆಳಕಿಗೆ ಬಂದಿದೆ











