ನಕಲಿ ದಾಖಲೆ ಸೇರಿಸಿ ಸರ್ಕಾರಿ ಜಮೀನುಗಳ ಕಬಳಿಕೆ ಒಟ್ಟು 16 ಕಂದಾಯ ಅಧಿಕಾರಿಗಳ ಮೇಲೆ ಎಫ್ಐಆರ್ ದಾಖಲು.

30/11/2025 9:26 AM Total Views: 95094

Gouse Dafedar

ನಕಲಿ ಭೂದಾಖಲೆಗಳ ಸೇರ್ಪಡೆ: 16 ಸರ್ಕಾರಿ ನೌಕರರ ಮೇಲೆ ಎಫ್ ಐ ಆರ್ ದಾಖಲು

 

ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ಯೂಟ್ಯೂಬ್ ಚಾನಲ್ ನ್ನು ಸಬ್ ಸ್ಕ್ರೈಬ್ ಮಾಡಿ

Read Our Photo Story
ತಾಜಾ ಹಾಗು ನಿಖರ ಸುದ್ದಿಗಳನ್ನು ನೋಡಲು ನಮ್ಮ ವಾಟ್ಸಾಪ್ ಗ್ರೂಪ್ ನ್ನು ಸೇರಿರಿ

ಬೆಂಗಳೂರಿನ ನಗರ : ನವಂಬರ್ 28 ಆನೇಕಲ್ ತಾಲ್ಲೂಕಿನ, ಅಭಿಲೇಖಾಲಯ (ರೆಕಾರ್ಡ್ ರೂಮ್ಸ್) ಕಾರ್ಯಾಲಯದ ಕೆಲವು ಸಿಬ್ಬಂದಿಗಳು ಭೂಗಳ್ಳರ ಜೊತೆ ಶಾಮೀಲಾಗಿ ನಕಲಿ ದಾಖಲಾತಿಗಳನ್ನು ಸೇರಿಸಿ ಸರ್ಕಾರಿ ಜಮೀನುಗಳ ಕಬಳಿಕೆಗೆ ಸಹಕರಿಸಿರುವುದು ಕಂಡುಬಂದಿದ್ದು, ಒಟ್ಟು 16 ಸರ್ಕಾರಿ ನೌಕರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ ಜಗದೀಶ ಅವರು ತಿಳಿಸಿದ್ದಾರೆ.

 

ಉಪ ತಹಸಿಲ್ದಾರರಾದ ಚಂದ್ರಶೇಖರ್ ಬಿ.ಕೆ,

Advertisement Image

ಶಿರಸ್ತೇದಾರರಾದ ಮಾರುತಿ ಪ್ರಸಾದ್, ಮತ್ತು ದಿನಕರನ್ ಜಿ, ಹಾಗೂ ಲೋಕೇಶ್ ಎಸ್,

ಪ್ರಥಮ ದರ್ಜೆ ಸಹಾಯಕರಾದ ಮಹೇಶ್, ಮಂಗಳ, ನಾರಾಯಣ,

ದ್ವಿತೀಯ ದರ್ಜೆ ಸಹಾಯಕರಾದ ಕೆ ರಾಘವೇಂದ್ರ, ಮಂಜುನಾಥ್ ಎಂ ವಿ,

ಡಿ ದರ್ಜೆ ನೌಕರರಾದ ಕಲ್ಪನಾ ಪಿ, ಮಂಜುನಾಥ್, ಶೋಭಾ ಎನ್, ಪ್ರವೀಣ್, ಮುನಿರಾಜು, ಮಂಜುಳಮ್ಮ ಮತ್ತು ಮೀನಾಕ್ಷಿ ಅವರುಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

 

Oplus_16908288
Oplus_16908288
Oplus_16908288
Oplus_16908288
Oplus_16908288
Oplus_16908288
Oplus_16908288

 

ಈ ಪ್ರದೇಶದ ಸರ್ಕಾರಿ ಜಮೀನುಗಳ ಮೂಲ ಮಂಜೂರಾತಿ ಕಡತಗಳು, ದರಖಾಸ್ತು ವಹಿ, ಸಾಗುವಳಿ ಚೀಟಿಗಳು, ಸಾಗುವಳಿ ಚೀಟಿ ವಿತರಣಾ ವಹಿ, ಮಂಜೂರಿ ನಡವಳಿ ವಹಿ, ಇನಾಂ ಡಿಸಿ ಆದೇಶದ ಕಡತಗಳು, ಭೂ ಸುಧಾರಣೆ (LRF) ಮೂಲ ಕಡತಗಳು, ಐ.ಎಲ್. ಆರ್.ಆರ್ ವಹಿಗಳು, ಷೇತುವಾರು, ಸೂಡು ಪಹಣಿಗಳು, ಕೈಬರಹ ಪಹಣಿಗಳು ಹಾಗೂ ಇತರೆ ದಾಖಲೆಗಳಲ್ಲಿ  ಖೋಟ್ಟಿ (ನಕಲಿ) ದಾಖಲಾತಿಗಳನ್ನು ಸೇರಿಸಿ ಭೂಗಳ್ಳರಿಗೆ ಸರ್ಕಾರಿ ಜಮೀನನ್ನು ಕಬಳಿಸಲು ಸಹಕಾರ ಮಾಡಿರುವುದು ಭೂಸುರಕ್ಷಾ ಯೋಜನೆಯಡಿಯಲ್ಲಿ ದಾಖಲಾತಿಗಳನ್ನು ಸ್ಕ್ಯಾನ್ ಮಾಡುವ ಸಂದರ್ಭದಲ್ಲಿ ಕಂಡುಬಂದಿರುತ್ತದೆ ಎಂದು ತಹಶೀಲ್ದಾರ್, ಆನೇಕಲ್ ರವರು ವರದಿ ಮಾಡಿದ್ದರು.

 

ಈ ಕುರಿತು ಮರು ಪರಿಶೀಲಿಸಲಾಗಿ, ಖೋಟ್ಟಿ (ನಕಲಿ) ದಾಖಲಾತಿಗಳೆಂದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ, ಕಳೆದ 5 ವರ್ಷ ಹಿಂದಿನಿಂದ ಅಭಿಲೇಖಾಲಯದಲ್ಲಿ ಕೆಲಸ ನಿರ್ವಹಿಸಿದಂತಹ ಒಟ್ಟು 16 ಸರ್ಕಾರಿ ನೌಕರರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಪ್ರಕರಣಗಳನ್ನು ದಾಖಲಿಸಲಾಗಿರುತ್ತದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಈ  ಖೋಟ್ಟಿ ದಾಖಲಾತಿಗಳನ್ನು ಸೃಷ್ಟಿ ಮಾಡುವಲ್ಲಿ ಖಾಸಗಿ ವ್ಯಕ್ತಿಗಳು ಸಹಕಾರ ಮಾಡುತ್ತಿರುವ ಬಗ್ಗೆ ಹಾಗೂ ಖೋಟ್ಟಿ ದಾಖಲೆಗಳನ್ನು ಸೃಷ್ಟಿ ಮಾಡುವಂತಹ ವ್ಯವಸ್ಥಿತ ಗುಂಪುಗಳ ಮೇಲೆಯೂ ಸಹ ವಿಚಾರಣೆ ಕೈಗೊಂಡು ಅವರ ಮೇಲೆಯೂ ಸಹ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ತಹಶೀಲ್ದಾರ್ ಆನೇಕಲ್ ರವರಿಗೆ ಸೂಚಿಸಲಾಗಿದೆ ಎಂದಿದ್ದಾರೆ.

 

ಅಲ್ಲದೇ, ಸರ್ಕಾರಿ ಜಮೀನುಗಳ ಬಗ್ಗೆ ಕಂದಾಯ ಇಲಾಖೆಗೆ ಸಂಬಂಧಪಟ್ಟ ಯಾವುದೇ ರೀತಿಯ ಆದೇಶಗಳನ್ನು, ಖಾತೆ ಮಾಡುವ ಸಮಯದಲ್ಲಿ ಜಿಲ್ಲಾಧಿಕಾರಿಗಳ ಅನುಮತಿ ಪಡೆದುಕೊಂಡು ಖಾತೆ ಮಾಡಲು ಜಿಲ್ಲೆಯ ಎಲ್ಲ ವಿಶೇಷ ತಹಶೀಲ್ದಾರ್ ರವರಿಗೆ ಈಗಾಗಲೇ ಸೂಚಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

 

ಆನೇಕಲ್ ತಾಲ್ಲೂಕಿನಲ್ಲಿರುವ ಸರ್ಕಾರಿ ಜಮೀನುಗಳಿಗೆ ಸಂಬಂಧಿಸಿದಂತೆ ಖಾತೆ ಬದಲಾವಣೆ/ಮ್ಯೂಟೇಷನ್‌ಗಳಾಗಿರುವ ಬಗ್ಗೆ ಪರಿಶೀಲಿಸಿ ವರದಿ ನೀಡಲು ಅನೇಕಲ್ ತಹಶೀಲ್ದಾರರಿಗೆ ಸೂಚಿಸಲಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

WhatsApp Icon
Subscribe My YouTube